ಗದ್ಯಪಾಠ -4 ಭಾಗ್ಯಶಿಲ್ಪಿಗಳು - ಡಿ.ಎಸ್.ಜಯಪ್ಪಗೌಡ
ಕೃತಿಕಾರರ ಪರಿಚಯ :
ದಾರದಹಳ್ಳಿ ಸುಬ್ಬೇಗೌಡ ಜಯಪ್ಪಗೌಡ ಎಂಬ ಪೂರ್ಣ ಹೆಸರಿನ ಡಿ. ಎಸ್. ಜಯಪ್ಪಗೌಡ ರವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆನತಾಲೂಕಿನ ದಾರದಹಳ್ಳಿಯಲ್ಲಿ 1947 ರಲ್ಲಿ ಜನಿಸಿದರು.
ಇವರು ಕರ್ನಾಟಕ ಗ್ರಾಮೀಣ ಸಂಸ್ಥೆಗಳು. ಕರ್ನಾಟಕದ ಕಡಲಾಚೆಯ ಸಂಪರ್ಕಗಳು. ಮೈಸೂರು ಒಡೆಯರು. ಜನಪದ ಆಟಗಳು, ದಿವಾನ್ ಸರ್ ಎಂ. ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು ಮುಂತಾದ ಕೃತಿಗಳನ್ನು ರಚಿಸಿದ್ದಾರೆ,
ಶ್ರೀಯುತರ. ಕರ್ನಾಟಕದ ಕಡಲಾಚೆಯ ಸಂಪರ್ಕಗಳು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ,
ಕೆಳಗಿನ ಪ್ರಶ್ನೆಗಳಿಗೆ ಒಂದೊಂದು ವಾಕ್ಯದಲ್ಲಿ ಉತ್ತರ ಬರೆಯಿರಿ.
ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.
೧. ನಾಲ್ವಡಿ ಕೃಷ್ಣರಾಜ ಒಡೆಯರು ಯಾವಾಗ ಪಟ್ಟಾಭಿಷಿಕ್ತರಾದರು?
ನಾಲ್ವಡಿ ಕೃಷ್ಣರಾಜ ಒಡೆಯರು 1895ರಂದು ಪಟ್ಟಾಭಿಷಿಕ್ತರಾದರು
೨. ನಾಲ್ವಡಿ ಕೃಷ್ಣರಾಜ ಒಡೆಯರು ಯಾವುದಕ್ಕಾಗಿ ಕಂಕಣಬದ್ಧರಾದರು?
ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ
ಕಂಕಣಬದ್ಧರಾಗಿದ್ದರು.
೩. ಏಷ್ಯಾ ಖಂಡದಲ್ಲಿಯೇ ಮೊದಲು ಪ್ರ್ರಾರಂಭಿಸಿದ ಜಲ ವಿದ್ಯುತ್ ಯೋಜನೆ
ಯಾವುದು?
ಕಾವೇರಿ ನದಿಗೆ ಸ್ಥಾಪಿಸಿದ ಶಿವನ ಸಮುದ್ರ (೧೯೦೦) ಜಲ ವಿದ್ಯುತ್ ಯೋಜನೆ ಏಷ್ಯಾ
ಖಂಡದಲ್ಲಿಯೇ ಮೊದಲು ಪ್ರ್ರಾರಂಭಿಸಿದ ಜಲ ವಿದ್ಯುತ್ ಯೋಜನೆ
೪. ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಯಾವ ಪದವಿಯನ್ನು ನೀಡಿ ಗೌರವಿಸಿತು?
ಬ್ರಿಟಿಷ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಸರ್ ಪದವಿ ನೀಡಿ ಗೌರವಿಸಿತು.
೫. ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ಯಾರು?
ವಿಶ್ವೇಶ್ವರಯ್ಯರವರನ್ನು ದಿವಾನರಾಗಿ ನೇಮಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರು.
೬. ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಯಾವ ದಿನಾಚರಣೆಯನ್ನು
ಮಾಡಲಾಗುತ್ತಿದೆ?
ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಇಂಜಿನಿಯರ್ಸ್ ದಿನಾಚರಣೆಯನ್ನು
ಮಾಡಲಾಗುತ್ತಿದೆ
ಕೆಳಗಿನ ಪ್ರಶ್ನೆಗಳಿಗೆ ಮೂರು - ನಾಲ್ಕು ವಾಕ್ಯಗಳಲ್ಲಿ ಉತ್ತರ ಬರೆಯಿರಿ.
೧. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯಾವ ಕ್ಷೇತ್ರಗಳು ಸ್ವಯಂ ಆಡಳಿತ ಕ್ಷೇತ್ರಗಳಾದವು?
ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ೧. ಗ್ರಾಮ ನಿರ್ಮಲೀಕರಣ ೨. ವೈದ್ಯ ಸಹಾಯ ೩. ವಿದ್ಯಾ ಪ್ರಚಾರ ೪. ನೀರಿನ ಸೌಕರ್ಯ ೫. ಸಾರಿಗೆ(ಪ್ರಯಾಣ) ಸೌಲಭ್ಯ ಕ್ಷೇತ್ರಗಳು ಸ್ವಯಂ ಆಡಳಿತ ಕ್ಷೇತ್ರಗಳಾದವು
೨. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯಾವ ನೀರಾವರಿ ಯೋಜನೆಗಳು ಕಾರ್ಯರೂಪಕ್ಕೆ ಬಂದವು?
ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ವಾಣ ವಿಲಾಸ ಸಾಗರ (ಮಾರಿ ಕಣ ವೆ) ಆಣೆಕಟ್ಟು ನಿರ್ಮಾಣ (೧೯೦೭) ಕಾವೇರಿ ನದಿಗೆ ಅಡ್ಡಲಾಗಿ ಕೃಷ್ಣರಾಜ ಸಾಗರ ಆಣೆಕಟ್ಟು ನಿರ್ಮಾಣ (೧೯೧೧) ಶಿವನಸಮುದ್ರದ ಬಳಿ ಕಾವೇರಿ ನದಿಯಿಂದ ಜಲವಿದ್ಯುತ್ ಉತ್ಪಾದನಾ ಕೇಂದ್ರಪ್ರಾ ರಂಭವಾಯಿತು.(೧೯೦೦) ಈ ನೀರಾವರಿ ಯೋಜನೆಗಳು ಕಾರ್ಯರೂಪಕ್ಕೆ ಬಂದವು
೩. ಶಿಕ್ಷಣದ ಬಗ್ಗೆ ವಿಶ್ವೇಶ್ವರಯ್ಯ ಅವರು ಏನೆಂದು ಹೇಳಿದ್ದಾರೆ?
ವಿಶ್ವೇಶ್ವರಯ್ಯ ಅವರು ಆಧುನಿಕ ಶಿಕ್ಷಣವೇ ಎಲ್ಲ ಸಮಸ್ಯೆಗಳಿಗೂ ಪರಮೋಚ್ಚ ಪರಿಹಾರ ಎಂದು ನಂಬಿದ್ದರು. ಶಿಕ್ಷಣಕ್ಕಾಗಿ ಶಿಕ್ಷಣವಿರಬೇಕು. ಅದು ಕೆಲವೇ ಜನರ ಸ್ವತ್ತಾಗದೆ ಪ್ರಗತಿಪರ ರಾಜ್ಯದಲ್ಲಿ ಎಲ್ಲರ ಆಜನ್ಮಸಿದ್ಧ ಹಕ್ಕಾಗಬೇಕು. ಎಂದು ಹೇಳಿದ್ದಾರೆ
೪. ನೆಹರೂ ಅವರು ಸರ್. ಎಂ. ವಿಶ್ವೇಶ್ವರಯ್ಯ ಅವರ ಬಗ್ಗೆ ಏನೆಂದು ಹೇಳಿದ್ದಾರೆ?
ನೆಹರೂ ಅವರು ಸರ್. ಎಂ. ವಿಶ್ವೇಶ್ವರಯ್ಯ ಅವರ ಬಗ್ಗೆ “ದುರದೃಷ್ಟ್ಟವಶಾತ್ ಭಾರತೀಯರಾದ ನಾವು ಹೆಚ್ಚು ಮಾತನಾಡುವವರು ಮತ್ತು ನುಡಿದಂತೆ ನಡೆಯಲಾರದವರು ಎಂಬ ದೂಷಣೆಗೆ ಒಳಗಾಗಿದ್ದೇವೆ. ತಾವು ಈ ಮಾತಿಗೆ ಬಹು ದೊಡ್ಡ ರೀತಿಯಲ್ಲಿ ಹೊರತಾಗಿದ್ದೀರಿ.ತಾವು ಕಡಿಮೆ ಮಾತನಾಡಿದ್ದೀರಿ ; ಹೆಚ್ಚು ಕೆಲಸ ಮಾಡಿದ್ದೀರಿ. ಅದನ್ನು ನಾವು ತಮ್ಮಿಂದ ಕಲಿಯೋಣ.” ಎಂದು ಹೇಳಿದ್ದಾರೆ
೫. ಹಣಕಾಸು ನೀತಿಯಲ್ಲಿ ವಿಶ್ವೇಶ್ವರಯ್ಯ ಅವರು ಮಾಡಿದ ಮಾರ್ಪಾಡುಗಳಾವುವು?
ವಿಶ್ವೇಶ್ವರಯ್ಯ ಅವರು ಕ್ರಿ.ಶ. ೧೯೧೩ರಲ್ಲಿ ಮೈಸೂರು ಬ್ಯಾಂಕನ್ನು ಸ್ಥಾಪಿಸಿದರು. ಕೈಗಾರಿಕೆಗಳ ಅಭಿವೃದ್ಧಿಗೆ ಫೀಡರ್ ಬ್ಯಾಂಕ್ ರಚಿಸಿದರು. ಕೈಗಾರಿಕಾ ಹೂಡಿಕೆ ಮತ್ತು ಅಭಿವೃದ್ಧಿ ನಿಧಿಗಳನ್ನು ರಚಿಸಿದರು ಸಾರ್ವಜನಿಕ ಜೀವವಿಮಾ ಯೋಜನೆ ಜಾರಿಗೆ ತಂದರು. ಪ್ರಾಂತೀಯ ಸಹಕಾರಿ ಬ್ಯಾಂಕ್ಗಳನ್ನು ಸ್ಥಾಪಿಸಿದರು. ಅಭಿವೃದ್ಧಿನಿಧಿಗಳನ್ನು ರಚಿಸಿದರು ಸಾರ್ವಜನಿಕ ಜೀವವಿಮಾ ಯೋಜನೆ ಜಾರಿಗೆ ತಂದರು. ಪ್ರಾಂತೀಯ ಸಹಕಾರಿ ಬ್ಯಾಂಕ್ಗಳನ್ನು ಸ್ಥಾಪಿಸಿದರು.
ಇ) ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿ.
1. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಮೈಸೂರು ‘ಮಾದರಿ ಮೈಸೂರು ರಾಜ್ಯ’ ಹೇಗಾಯಿತು?
ನಾಲ್ವಡಿ ಕೃಷ್ಣರಾಜ ಒಡೆಯರು ೧೯೦೨ ರಲ್ಲಿ ಮೈಸೂರು ರಾಜ್ಯದ ನೇರ ಉಸ್ತುವಾರಿ ವಹಿಸಿಕೊಂಡರು. ಆಗ ದಿವಾನರಾಗಿದ್ದ ಸರ್. ಕೆ. ಶೇಷಾದ್ರಿ ಅಯ್ಯರ್ರವರು ಸಹಕಾರದೊಡನೆ ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾದರು. ೧೯೨೩ರಲ್ಲಿ ಪ್ರಜಾಪ್ರತಿನಿಧಿ ಶಾಸನಬದ್ಧ ಸಂಸ್ಥೆಯನ್ನಾಗಿ ಮಾರ್ಪಡಿಸಿದರು. ೧೯೦೭ ರಲ್ಲಿ ನ್ಯಾಯ ವಿಧಾಯಕ ಸಭೆಯನ್ನೂ ಸಹ ಸ್ಥಾಪಿಸಿದರು. ೧. ಗ್ರಾಮ ನಿರ್ಮಲೀಕರಣ ೨. ವೈದ್ಯ ಸಹಾಯ ೩. ವಿದ್ಯಾ ಪ್ರಚಾರ ೪. ನೀರಿನ ಸೌಕರ್ಯ ೫. ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳಲ್ಲಿ ಸ್ವಯಂ ಆಡಳಿತ ಕ್ಷೇತ್ರಗಳದವು. ಸಾಹಿತ್ಯ , ಸಂಗೀತ, ವಾಸ್ತುಶಿಲ್ಪಗಳ ಅಭಿವೃದ್ಧಿಗೆ ಒತ್ತು ನೀಡಿದರು. ನಾಡಿನಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವಾದ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದರು. ಬೆಂಗಳೊರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್,ಮೈಸೂರು ಬ್ಯಾಂಕಿನ ಸ್ಥಾಪನೆ ಮಾಡಲಾಯಿತು. ಉಚಿತ ಆಸ್ಪತ್ರೆಯ ಕಾರ್ಯಾರಂಭ ಮಾಡಿದರು . ೧೯೦೬ರಲ್ಲಿ ಸಹಕಾರ ಸಂಘವನ್ನುಸ್ಥಾಪಿಸಲಾಯಿತು. ರೈಲು ಯೋಜನೆಯನ್ನು ಜಾರಿಗೆ ತಂದರು.ಅಲ್ಲದೆ ಒಡೆಯರ ಕಾಲದಲ್ಲಿ ಶಿವನ ಸಮುದ್ರ ಜಲವಿದ್ಯುತ್ ಯೋಜನೆ, ವಾಣಿ ವಿಲಾಸ ಸಾಗರ ಆಣೆಕಟ್ಟು ಮತ್ತು ಕನ್ನಾಂಬಾಡಿಯಲ್ಲಿ ಕೃಷ್ಣರಾಜಸಾಗರ ಆಣೆಕಟ್ಟು ನಿರ್ಮಾಣ ಮಾಡಿದ್ದರಿಂದ ವಿದ್ಯುತ್ ಮತ್ತು ನೀರಾವರಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದರು . ಕಡ್ಡಾಯ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸ ಉಚಿತವಾಗಿ ಪ್ರಾರಂಭವಾಯಿತು. ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾವನ್ನಾಗಿ ರೂಪಿಸಿದರು.ಇವರ ಕಾಲದಲ್ಲಿ ಇಡೀ ¨ ಯಾವ ಸಂಸ್ಥಾದಲ್ಲಿ ಕಾಣದ ಅಭಿವೃದ್ಧಿಯನ್ನು ಮೈಸೂರು ರಾಜ್ಯವು ಕಂಡುದರಿಂದ , ಮೈಸೂರು ಮಾದರಿ ಮೈಸೂರು ರಾಜ್ಯ’ ಎಂಬ ಕೀರ್ತಿಗೆಗೆ ಪ್ರಾಪ್ತವಾಯಿತು.
2. ವಿಶ್ವೇಶ್ವರಯ್ಯ ಅವರು ಮೈಸೂರು ದಿವಾನರಾಗಿ ಸಲ್ಲಿಸಿದ ಸೇವೆಯನ್ನು ಕುರಿತು ಬರೆಯಿರಿ.
ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿಕೃಷ್ಣರಾಜ ಒಡೆಯರು ವಿಶ್ವೇಶ್ವರಯ್ಯ ಅವರನ್ನು ದಿವಾನರನ್ನಾಗಿ ನೇಮಿಸಿದರು. ದಿವಾನರಾದ ನಂತರ ಆಡಳಿತದಲ್ಲಿ ಹೊಸ ಮಾದರಿಯನ್ನು ಅನುಷ್ಠಾನಗೊಳಿಸಿ ಕೆಲಸ ಕಾರ್ಯಗಳಲ್ಲಿ ಸುಧಾರಣೆ ತಂದರು. ದಕ್ಷತೆ ಮತ್ತುಪ್ರಾಮಾಣಿಕತೆಗೆ ಒತ್ತು ನೀಡಿದರು. ನ್ಯಾಯಾಂಗ ಮತ್ತು ಕಾರ್ಯಾಂಗವನ್ನು ಅಧಿಕಾರವನ್ನು ಪ್ರತ್ಯಾರ್ಪ್ರತ್ಯೇಕಗೊಳಿಸುತ್ತದೆ . ಶಿಕ್ಷಣದ ವಿವಿಧ ಯೋಜನೆಗಳನ್ನು
ರೂಪಿಸಿದರು. ೧೯೧೩ ರಲ್ಲಿ ಪ್ರ್ರಾಥಮಿಕ ಶಿಕ್ಷಣ ನಿಬಂಧವನ್ನು ಜಾರಿಗೆ ತಂದರು. ಮೈಸೂರು ಸಂಸ್ಥಾನದ ಪ್ರತ್ಯೇಕವಾದ ಪ್ರೌಢಶಿಕ್ಷಣದ ಅಂತಿಮಪರೀಕ್ಷೆ ನಡೆಸುವ ಯೋಜನೆಯನ್ನು ಆರ್ಥಿಕ ಪರಿಷತ್ತಿನ ಮೂಲಕ ರೂಪುಗೊಳಿಸಿದರು . ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆ ಇವರಕಾಲದಲ್ಲಾಯಿತು. ಬೆಂಗಳೂರಿನಲ್ಲಿ ಮೆಕಾನಿಕನಿಕಲ್ ಎಂಜಿನಿಯರಿಂಗ್ ಶಾಲೆ, ಮೈಸೂರಿನಲ್ಲಿ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆಗಳನ್ನೂ ಪ್ರಾರಂಭಿಸಿದರು .ಕನ್ನಡ ಸಾಹಿತ್ಯ ಪರಿಷತ್ತನ್ನು ’ ಸ್ಥಾಪಿಸಿದ್ದು ಇವರ ಕಾಲದ ಮತ್ತೊಂದು ಮಹತ್ವದ . ವಿಶ್ವೇಶ್ವರಯ್ಯ ಅವರು ಕೈಗಾರಿಕೆಗೆ ಅಗ್ರಪ್ರಾಶ ನೀಡಿದ್ದರು. “ಕೈಗಾರಿಕೀಕರಣ ಇಲ್ಲವೆ ಅವನತಿ” ಎಂಬ ಘೋಷಣೆ ಮಾಡಿದರು . ಇವರ ಕಾಲದಲ್ಲಿ ¨ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸ್ಥಾಪಿತವಾಯಿತು. ಇದಲ್ಲದೆ ಹೆಂಚಿನ ಕಾರ್ಖಾನೆ, ಮೊಳೆ ಮತ್ತು ಗೊಬ್ಬರ ತಯಾರಿಕಾ ಸಕ್ಕರೆ ಕಾರ್ಖಾನೆ, ಔಷದತಯಾರಿಕಾ ಘಟಕ, ಗಂಧದ ಎಣ್ಣೆ, ಬೆಂಕಿಕಡ್ಡಿ ಹಾಗೂ ಕಾಗದದ ಕಾರ್ಖಾನೆಗಳು ಸ್ಥಾಪಿತವಾದವು. ಸೋಪು ಹಾಗೂ ಲೋಹ ತಯಾರಿಕೆ, ಕಲೆಮತ್ತು ಕರಕುಶಲ ಡಿಪೋ, ಕೃಷ್ಣರಾಜೇಂದ್ರ ಬಟ್ಟೆ ಗಿರಣ,ಕಾಗದ ತಿರುಳು, ರಟ್ಟು, ಪೆನ್ಸಿಲ್, ಬೆಂಕಿಕಡ್ಡಿ ಮತ್ತು ಪೀಠೋಪಕರಣಗಳು ತಯಾರಿಕಾಘಟಕಗಳು -ಹೀಗೆ ನೂರಾರು ಕೈಗಾರಿಕೆಗಳು ಪ್ರಾರಂಭಗೊಂಡವು. ೧೯೧೩ ರಲ್ಲಿ ಮೈಸೂರು ಬ್ಯಾಂಕನ್ನು ಸ್ಥಾಪಿಸಿದರು.. ಕೈಗಾರಿಕೆ ಅಭಿವೃದ್ಧಿಗೆ ಫೀಡರ್ ಬ್ಯಾಂಕ್ ಹಾಗೂ ಕೈಗಾರಿಕಾ ಹೂಡಿಕೆ ಮತ್ತು ಅಭಿವೃದ್ಧಿನಿಧಿಗಳನ್ನು ಸ್ಥಾಪಿಸಿದರು.. ಸಾರ್ವಜನಿಕ ಜೀವವಿಮಾ ಯೋಜನೆ ಜಾರಿಗೆ ತಂದರು. ಪ್ರಾಂತೀಯ ಸಹಕಾರಿ ಬ್ಯಾಂಕ್ಗಳನ್ನು ಸ್ಥಾಪಿಸಿದರು. ರಾಜ್ಯದಆಸ್ತಿಯನ್ನು ಹೆಚ್ಚಿಸಿ, ಆದಾಯ ತರುವುದರ ಮೂಲಕ ಅಭಿವೃದ್ಧಿ ಕಾರ್ಯಗಳ ಪ್ರಭಾವವನ್ನು ಅಳೆಯಲು ಅನುಕೂಲವಾಗುವಂತೆ ಆಯವ್ಯಯದಲ್ಲಿಹೊಸ ದೃಷ್ಟಿಕೋಣವನ್ನು ಕಂಡುಕೊಂಡರು .
3. ಶಿಕ್ಷಣ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯ ಅವರು ಸಲ್ಲಿಸಿದ ಕೊಡುಗೆಯನ್ನು ತಿಳಿಸಿ.
ವಿಶ್ವೇಶ್ವರಯ್ಯಅವರುಆಧುನಿಕ ಶಿಕ್ಷಣವೇ ಎಲ್ಲ ಸಮಸ್ಯೆಗಳಿಗೂ ಪರಮೋಚ್ಚ ಪರಿಹಾರ,
ಶಿಕ್ಷಣವು ಸಂಜೀವಿನಿಎಂಬುದನ್ನು ಅರಿತು“ಶಿಕಶಿಕ್ಷಣಕ್ಕಾಗಿ ಶಿಕ್ಷಣವಿರಬೇಕು. ಅದು ಕೆಲವೇ ಜನರ ಸೊತ್ತಾಗದೆ ಪ್ರಗತಿಪರ ರಾಜ್ಯದಲ್ಲಿ ಎಲ್ಲರ ಆಜನ್ಮಸಿದ್ಧ ಹಕ್ಕಾಗಬೇಕು”ಎಂದು ಹೇಳಿದ್ದಾರೆ.ಅದಕ್ಕಾಗಿ ಅವ್ರು ಶಿಕ್ಷಣದ ವಿವಿಧ ಯೋಜನೆಗಳನ್ನು ರೂಪಿಸಿದರು. ೧೯೧೩ ರಲ್ಲಿ ಪ್ರಾಥಮಿಕ ಶಿಕ್ಷಣ ನಿಬಂಧನೆಯನ್ನು ಜಾರಿಗೆ ತಂದರು.ಪ್ರೌಢಶಿಕ್ಷಣ ಶಾಲೆ ಮದ್ರಾಸ್ ವಿಶ್ವವಿದ್ಯಾನಿಲಯದ ನಿಯಂತ್ರಣಕ್ಕೆ ಒಳಪಟ್ಟಿದ್ದವು. ಇದನ್ನು ಬದಲಿಸಿ ಮೈಸೂರು ಸಂಸ್ಥಾನವೇ ಪ್ರೌಢಶಿಕ್ಷಣದ ಅಂತಿಮ ಪರೀಕ್ಷೆ ನಡೆಸುವ ಯೋಜನೆಯನ್ನು ಆರ್ಥಿಕ ಪರಿಷತ್ತಿನ ಮೂಲಕ ರೂಪುಗೊಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದ
ಸ್ಥಾಪನೆ ಇವರ ಕಾಲದಲ್ಲಾಯಿತು. ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚ್ಚಿನ ಆದ್ಯತೆ ನೀಡಿದರು. ಇದಕ್ಕಾಗಿಯೇ ಬೆಂಗಳೂರು ಮೆಕಾನಿಕಲ್ಎಂಜಿನಿಯರಿಂಗ್ ಶಾಲೆ, ಮೈಸೂರಿನಲ್ಲಿ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆಗಳನ್ನು ಪ್ರಾರಂಭಿಸಿದರು. ಕನ್ನಡ ಭಾಷೆ ಮತ್ತು ಸಾಹಿತ್ಯಗಳ ಬಗ್ಗೆಸಾರ್ವಜನಿಕರಲ್ಲಿ ಉಂಟಾಗಿದ್ದ ಆಸಕ್ತಿಯನ್ನು ‘ಕನ್ನಡ ಸಾಹಿತ್ಯಪರಿಷತ್ತನ್ನು ’ ಸ್ಥಾಪಿಸಿದ್ದು ಇವರ ಕಾಲದ ಮತ್ತೊಂದು ಮಹತ್ವದಸ್ಥಾನವಿ ದೆ.
1. “ಸಾಮಾಜಿಕ ಕಾನೂನುಗಳ ಹರಿಕಾರ.”
ಆಯ್ಕೆ :- ಈ ವಾಕ್ಯವನ್ನು “ಭಾಗ್ಯಶಿಲ್ಪಿಗಳು” ಪಾಠದಲ್ಲಿನ ಪಠ್ಯಪುಸ್ತಕ ರಚನಾ ಸಮಿತಿ ಆಯ್ಕೆ ಮಾಡಿರುವ “ನಾಲ್ವಡಿ ಕೃಷ್ಣರಾಜ ಒಡೆಯರ್” ಎಂಬ ಬಾಗದಿಂದ ಆರಿಸಲಾಗಿದೆ.
ಸಂದರ್ಭ:- ನಾಲ್ವಡಿ ಕೃಷ್ಣರಾಜ ಒಡೆಯರು ಆಡಳಿತ ವಿಕೇಂದ್ರಿಕರಣಕ್ಕೆ ಅನುವು ಮಾಡಿ ಕೊಟ್ಟು ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವನ್ನಾಗಿಸಿ ಸಾಮಾಜಿಕ ಕಾನೂನುಗಳ ಹರಿಕಾರ ’ ಎಂದು ಹೆಸರಾದರು ಎಂದು ಹೇಳುವ ಸಂದರ್ಭದಲ್ಲಿ ಈ ಮಾತನ್ನು ಉಲ್ಲೇಖಿಸಿದ್ದಾರೆ.
ಸ್ವಾರಸ್ಯ:- ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಆಡಳಿತ ವಿಕೇಂದ್ರೀಕರಣಗೊಳಿಸಿ ಕಾನೂನುಗಳನ್ನುಜಾರಿಗೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರನ್ನು “ಸಾಮಾಜಿಕ ಕಾನೂನುಗಳ ಹರಿಕಾರ” ಎಂದು ಕರೆದಿರುವುದು ಸ್ವಾರಸ್ಯಕರವಾಗಿದೆ.
2.“ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿತು.”
ಆಯ್ಕೆ :- ಈ ವಾಕ್ಯವನ್ನು ಶ್ರೀ ಡಿ.ಎಸ್. ಜಯಪ್ಪಗೌಡ ಅವರು ರಚಿಸಿರುವ “ ದಿವಾನ್ ಸರ್ ಎಂ. ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು”ಎಂಬ ಕೃತಿಯಿಂದ ಆಯ್ದು “ಭಾಗ್ಯಶಿಲ್ಪಿಗಳು” ಪಾಠಭಾಗದಿಂದ ಆರಿಸಲಾಗಿದೆ.
ಸಂದರ್ಭ:- ವಿಶ್ವೇಶ್ವರಯ್ಯನವರ ಮುಂಬೈ ಪ್ರಾಂತ್ಯದಲ್ಲಿ ಸಹಾಯಕ ಇಂಜಿನಿಯರಾಗಿ ಪೂನಾದ ಮುಥಾ ಕಾಲುವೆಗೆ ನೀರಿನ ನೆಲೆಯಾಗಿದ್ದ ಪೀಪ್ ಜಲಾಶಯಕ್ಕೆ ಸ್ವಯಂಚಾಲಿತ ಬಾಗಿಲುಗಳನ್ನು ಅಳವಡಿಸಿದರು ಎಂದು ಅವರ ಸಾಧನೆಯನ್ನು ಹೊಗಳುವ ಸಂದರ್ಭದಲ್ಲಿ ಲೇಖಕರು ಈ ಮಾತನ್ನು ಹೇಳಿದ್ದಾರೆ. .
ಸ್ವಾರಸ್ಯ:- ವಿಶ್ವೇಶ್ವರಯ್ಯನವರ ಬುದ್ಧಿಶಕ್ತಿ ಹಾಗೂ ಅನ್ವೇಷಣೆಗಳು ಸಾಧನೆಗಳು ಅವರ ಭೌದ್ಧಿಕ ಯಶಸ್ಸಿನ ಕಿರೀಟದ ಗರಿಗಳಾಗಿವೆ ಎಂಬುದು ಸ್ವಾರಸ್ಯಪೂರ್ಣವಾಗಿದೆ.
3.“ಮೈಸೂರು ಸಂಸ್ಥಾನಕ್ಕೆ ‘ಮಾದರಿ ಮೈಸೂರು’ ಎಂಬ ಕೀರ್ತಿ ಪ್ರಾಪ್ತವಾಯಿತು.”
ಆಯ್ಕೆ :- ಈ ವಾಕ್ಯವನ್ನು “ಭಾಗ್ಯಶಿಲ್ಪಿಗಳು” ಪಾಠದಲ್ಲಿನ ಪಠ್ಯಪುಸ್ತಕ ರಚನಾ ಸಮಿತಿ ಆಯ್ಕೆ ಮಾಡಿರುವ “ನಾಲ್ವಡಿ ಕೃಷ್ಣರಾಜ ಒಡೆಯರ್” ಎಂಬ ಬಾಗದಿಂದ ಆರಿಸಲಾಗಿದೆ.
ಸಂದರ್ಭ:- ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯದ ನೇರ ಉಸ್ತುವಾರಿಯನ್ನು ವಹಿಸಿಕೊಂಡ ನಂತರ ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಿ ದುಡಿದರು. ಮೈಸೂರು ರಾಜ್ಯವು ಅಭಿವೃದ್ಧಿಯನ್ನುಕಂಡಿತು ಆದ್ದರಿಂದ “ಮೈಸೂರು ಸಂಸ್ಥಾನಕ್ಕೆ ‘ಮಾದರಿ ಮೈಸೂರು’ ಎಂಬ ಕೀರ್ತಿ ಪ್ರಾಪ್ತವಾಯಿತು ”ಎಂದು ಹೇಳುವ ಸಂದರ್ಭದಲ್ಲಿ ಈ ಮಾತನ್ನು ಉಲ್ಲೇಖಿಸಲಾಗಿದೆ.
ಸ್ವಾರಸ್ಯ:- ಮೈಸೂರು ಸಂಸ್ಥಾನವು ಇಡಿ ಭರತ ¨ಖಂಡಕ್ಕೆ ಮಾದರಿ ಸಂಸ್ಥಾನವಾಗಿ ಕೀರ್ತಿಯನ್ನು ಪಡೆಯಿತು ಎನ್ನುವುದರ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ ಆಡಳಿತದ ಸಾಮರ್ಥ್ಯವನ್ನು ಎತ್ತಿ ತೋರಿಸಿರುವುದು ಸ್ವಾರಸ್ಯಪೂರ್ಣವಾಗಿದೆ.
4. “ತಾವು ಕಡಿಮೆ ಮಾತನಾಡಿದ್ದೀರಿ; ಹೆಚ್ಚು ಕೆಲಸ ಮಾಡಿದ್ದೀರಿ.”
ಆಯ್ಕೆ :- ಈ ವಾಕ್ಯವನ್ನು ಶ್ರೀ ಡಿ.ಎಸ್. ಜಯಪ್ಪಗೌಡ ಅವರು ರಚಿಸಿರುವ “ ದಿವಾನ್ ಸರ್ ಎಂ. ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು”ಎಂಬ ಕೃತಿಯಿಂದ ಆಯ್ದು “ಭಾಗ್ಯಶಿಲ್ಪಿಗಳು” ಪಾಠಭಾಗದಿಂದ ಆರಿಸಲಾಗಿದೆ.
ಸಂದರ್ಭ:- ವಿಶ್ವೇಶ್ವರಯ್ಯನವರ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಭಾರತದ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರೂ ಅವರು ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಈ ಮಾತನ್ನುಹೇಳಿದ್ದಾರೆ.
ಸ್ವಾರಸ್ಯ:- ಈ ವಾಕ್ಯ ದಲ್ಲಿ ವಿಶ್ವೇಶ್ವರಯ್ಯನವರ ವಾಸ್ತವ ಚಿಂತನೆ , ಕಾರ್ಯತತ್ಪರತೆ , ನಿಸ್ವಾರ್ಥತತೆಯನ್ನು ಸ್ವಾರಸ್ಯಕರವಾಗಿ ವರ್ಣಿಸಲಾಗಿದೆ.